ಹನೂರು: ಪಟ್ಟಣದ ಆರ್.ಎಸ್.ದೊಡ್ಡಿ ಬಳಿಯ ಪೊಲೀಸ್ ವಸತಿ ಗೃಹದ ಸಮೀಪದಲ್ಲಿ ಶನಿವಾರ ಟೈರ್ ಸಿಡಿದ ಪರಿಣಾಮ ಹಳ್ಳಕ್ಕೆ ಬಿದ್ದು ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.
ಯಳಂದೂರು ತಾಲೂಕಿನ ಕೊಮಾರನಪುರ ಗ್ರಾಮದ ರಾಮಸ್ವಾಮಿ (52)ಮೃತರು. ಅವರು ಬೆಳಗ್ಗೆ 11 ಗಂಟೆಯಲ್ಲಿ ಕಾರ್ಯನಿಮಿತ್ತ ಗ್ರಾಮದಿಂದ ಹನೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಪೊಲೀಸ್ ವಸತಿಗೃಹದ ಸಮೀಪದಲ್ಲಿ ಟೈರ್ ಸಿಡಿದಿದೆ ಎನ್ನಲಾಗಿದೆ. ಪರಿಣಾಮ ನಿಯಂತ್ರಣ ತಪ್ಪಿದ ಸವಾರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಮೃತನ ಸಹೋದರ ನಾಗೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತದೇಹವನ್ನು ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.