

ಬೆಂಗಳೂರು: ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ತಿಳಿದಿದ್ದರೂ ಅಂತಹ ದುಸ್ಸಾಹಸಕ್ಕೆ ಕೈಹಾಕಿದ್ದ ಪುಂಡರಿಗೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಮುದಿತ್ ಜೈನ್ ಹಾಗೂ ಮುಬಾರಕ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಈ ಹಿಂದೆ ಏರ್ಪೋರ್ಟ್ ರಸ್ತೆಯಲ್ಲಿಯೂ ವ್ಹೀಲಿಂಗ್ ಮಾಡಿದ್ದರು. ಬಂಧಿತರು ವ್ಹೀಲಿಂಗ್ಗೆ ಬಳಸುತ್ತಿದ್ದ 2 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)