

ನಂಜನಗೂಡು: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೈಕ್‌ಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಮೃತಪಟ್ಟಿದ್ದಾರೆ.
ತಾಲೂಕಿನ ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70 )ಮೃತ. ಸಿಂಧುವಳ್ಳಿ ಗ್ರಾಮದಿಂದ ನಂಜನಗೂಡು ಪಟ್ಟಣಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಂಜನಗೂಡಿನ ಬಸವೇಶ್ವರ ವೃತ್ತದ ಬಳಿ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದು ಕಾಲಿನ ಮೇಲೆ ಚಕ್ರ ಹರಿದಿದೆ. ಸ್ಥಳದಲ್ಲಿಯೇ ಸವಾರ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರ ಮಹೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.