ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

Published on

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೈಸೂರು ತಾಲೂಕಿನ ಹಲಗಯ್ಯನಹುಂಡಿಯ ಸುದೀಪ್ (20) ಮೃತಪಟ್ಟಿದ್ದಾರೆ.

ಹಲಗಯ್ಯನಹುಂಡಿ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂದೀಪ್ ಬೈಕಿನಲ್ಲಿ ಮೈಸೂರು ನಗರದ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net