ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

crime
Published on

ಹುಬ್ಬಳ್ಳಿ: ತಾಲೂಕಿನ ಕುಸುಗಲ್ಲ ಗ್ರಾಮದ ಬ್ಯಾಹಟ್ಟಿ ರಸ್ತೆಯ ಹೊರವಲಯದಲ್ಲಿ ಬೈಕ್ ಸವರಾರೊಬ್ಬರು ಬಸ್ ಓವರ್ ಟೇಕ್ ಮಾಡಲು ಹೋಗಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.

ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದ ಬಸವರಾಜ ಹನಸಿ ಮೃತರು. ಮೃತ ವ್ಯಕ್ತಿ ಅಳಗವಾಡಿ ಗ್ರಾಮದಿಂದ ಹುಬ್ಬಳ್ಳಿ ಕಡೆಗೆ ಹೋಗುವಾಗ ಬಸ್ ಓವರ್ ಟೇಕ್ ಮಾಡಲು ಹೋಗಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net