ನಂಜನಗೂಡು: ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಸಮೀಪದ ಮಾರ್ಬಳ್ಳಿ ಗ್ರಾಮದ ನಿವಾಸಿ ವಸಂತ್ (30) ಮೃತ ದುರ್ದೈವಿ. ಕೆಲಸದ ನಿಮಿತ್ತ ಭಾನುವಾರ ಬೆಳಗ್ಗೆ ಮಾರ್ಬಳ್ಳಿ ಗ್ರಾಮದಿಂದ ನಂಜನಗೂಡು ಕಡೆ ತೆರಳುವ ವೇಳೆ ನೂತನವಾಗಿ ನಿರ್ಮಿಸಿರುವ ರೈಲ್ವೆ ಸೇತುವೆ ಮೇಲೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದು, ಆತನ ಮೇಲೆ ಕ್ಯಾಂಟರ್ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.