ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

web 1
Published on

ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ಎರಡೂ ವಾಹನಗಳು ಜಖಂ

ಚಿಂತಾಮಣಿ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಗೋಪಸಂದ್ರ ಬಳಿ ಭಾನುವಾರ ರಾತ್ರಿ 8.30ರ ಸಮಯದಲ್ಲಿ ನಡೆದಿದೆ.

ತಾಲೂಕಿನ ಜಿ.ಕೋಡಿಹಳ್ಳಿ ಗೋವರ್ಧನ್(23) ಮೃತ.

ಬೆಂಗಳೂರು ಗ್ರಾಮಾತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಾರ್ ಸರ್ವೀಸ್ ಗ್ಯಾರೇಜ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗೋವರ್ಧನ್, ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಕಾರ್ಯನಿಮಿತ್ತ ಸ್ವಗ್ರಾಮ ಜಿ.ಕೋಡಿಹಳ್ಳಿಗೆ ಬಂದಿದ್ದು, ದೇವನಹಳ್ಳಿಗೆ ವಾಪಸ್ ಹೋಗುತ್ತಿದ್ದಾಗ ಚಿಂತಾಮಣಿಯಿಂದ ಶ್ರೀನಿವಾಸಪುರ ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಕಾರಿನ ಬಲಭಾಗ ಮತ್ತು ಬೈಕ್ ಮುಂಭಾಗ ಜಖಂಗೊಂಡಿದೆ. ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಎರಡು ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net