ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Published on

ಕುದೂರು: ರಾಷ್ಟ್ರೀಯ ಹೆದ್ದಾರಿ 75ರ ತಿಪ್ಪಸಂದ್ರ ಹೋಬಳಿಯ ರಸ್ತೆಪಾಳ್ಯದ ಬಳಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿದ್ದಾನೆ.

ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಶಿವರಾಜ (22) ಮೃತ. ತೀವ್ರ ಗಾಯಗೊಂಡಿರುವ ಹೆಗ್ಗನಹಳ್ಳಿಯ ರುದ್ರೇಶ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ತಿಪಟೂರು ತಾಲೂಕಿನ ಮಸವನಘಟ್ಟ ಗ್ರಾಮಕ್ಕೆ ತೆರಳುತ್ತಿದ್ದಾಗ ರಸ್ತೆಪಾಳ್ಯ ಬಳಿ ಹಿಂದಿನಿಂದ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದ್ದರಿಂದ ವಾಹನ ಸವಾರ ಕೆಳಗೆ ಬಿದ್ದಿದ್ದು, ಕಾರು ಚಾಲಕ ಆತನ ತಲೆಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುದೂಉ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net