ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

kudligi house theft
Published on

ಕೊಳ್ಳೇಗಾಲ: ತಾಲೂಕಿನ ಕುಂತೂರು ಬಳಿ ಬುಧವಾರ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಲೂಕಿನ ಸಿಲ್ಕಲ್‌ಪುರ ಗ್ರಾಮದ ನಂಜುಂಡಸ್ವಾಮಿ(45) ಮೃತರು. ಇವರು ಕೊಳ್ಳೇಗಾಲದಿಂದ ಸ್ವಗ್ರಾಮವಾದ ಸಿಲ್ಕಲ್‌ಪುರಕ್ಕೆ ಬೈಕ್‌ನಲ್ಲಿ ತೆರಳುವಾಗ ಮೈಸೂರಿನಿಂದ ಕೌದವಳ್ಳಿ ಕಡೆಗೆ ಹೋಗುತ್ತಿದ್ದ ಕಾರು ಕುಂತೂರು ಸಮೀಪದ ಕಿನಕಹಳ್ಳಿ ಕ್ರಾಸ್ ಬಳಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಂಜುಂಡಸ್ವಾಮಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಹಾಗೂ ಅಗರ ಮಾಂಬಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೃತ ದೇಹವನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net