ನಿಯಂತ್ರಣ ತಪ್ಪಿದ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

01-SEP-GPT-1-
Published on

ಗುಂಡ್ಲುಪೇಟೆ: ಲಾರಿಯನ್ನು ಹಿಂದಿಕ್ಕಲು ಮುನ್ನುಗ್ಗಿದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ಬಾಳೆಕಾಯಿ ಮಂಡಿಯಲ್ಲಿ ಲೋಡರ್ ಆಗಿ ಕೆಲೆ ಮಾಡುತ್ತಿದ್ದ ಬೈಕ್ ಸವಾರ ಭೀಮನಬೀಡು ಗ್ರಾಮದ ಮನೋಜ್(23) ಮೃತರು. ಈತನ ಜತೆಗಿದ್ದ ಮಹೇಶ್ ಮತ್ತು ಅಭಿ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದ ಎದುರು ಸೋಮವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈಸೂರಿನತ್ತ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕಲು ವೇಗವಾಗಿ ಸಾಗಿದ ಕಾರಿನ ಹಿಂಭಾಗ ಲಾರಿಗೆ ತಾಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದು ರಸ್ತೆಯ ಮತ್ತೊಂದು ಬದಿಗೆ ನುಗ್ಗಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.

ಇದರಿಂದ ಬೈಕಿನಲ್ಲಿ ಬರುತ್ತಿದ್ದ ಮೂವರು ಕಾರ್ಮಿಕರಿಗೂ ತೀವ್ರ ಪೆಟ್ಟುಗಳಾಗಿದ್ದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಮನೋಜ್ ಸಾವಿಗೀಡಾದರೆ ಮತ್ತಿಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ,.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net