ಟೆಂಪೊ ಡಿಕ್ಕಿಯಾಗಿ ಬೈಕ್ ಸವಾರ ಸಾವು

6hgr1
ಸತೀಶ್
Published on

ಹಲಗೂರು: ಸಮೀಪದ ಡಿ.ಹಲಸಹಳ್ಳಿ ಗೇಟ್ ಬಳಿ ಬೈಕ್‌ಗೆ ಟೆಂಪೊ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿ.ಹಲಸಹಳ್ಳಿ ಗ್ರಾಮದ ವಾಸಿ ಸತೀಶ್(44) ಕಾರ್ಯ ನಿಮಿತ್ತವಾಗಿ ಭಾನುವಾರ ರಾತ್ರಿ ಹಲಗೂರಿಗೆ ಬಂದು ವಾಪಸ್ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಲಗೂರು ಕಡೆಯಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ಟೆಂಪೋ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸೋಮವಾರ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ದೇಹ ಒಪ್ಪಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net