ಅಪಘಾತದಲ್ಲಿ ಬೈಕ್ ಸವಾರ ಸಾವು

4 Dwd 3 Hanamesh
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬೈಕ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಗಾವಿ ರಸ್ತೆಯ ಹೈಕೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೊಪ್ಪಳ ಮೂಲದ ಹನಮೇಶ ಶರಣಪ್ಪ ನಾಯಕ (38) ಮೃತ ವ್ಯಕ್ತಿ. ಇವರು 11 ವರ್ಷಗಳಿಂದ ತಾಲೂಕಿನ ತೇಗೂರು ಗ್ರಾಮದಲ್ಲಿ ನೆಲೆಸಿದ್ದರು. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದರು. ಸಾರ್ವಜನಿಕರು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಹನಮೇಶ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net