

ಮಳವಳ್ಳಿ: ತಾಲೂಕಿನ ಸಂಶೆಟ್ಟಿಪುರ ಗೇಟ್ ಬಳಿಯ ಮೈಸೂರು ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾನೆ.
ತಮಿಳುನಾಡು ಮೂಲದ ರಾಗುಲ್ (25) ಮೃತ. ಹಿಂಬದಿ ಸವಾರ ವಿಘ್ನೇಶ್ ತೀವ್ರವಾಗಿ ಗಾಯಗೊಂಡಿದ್ದಾನೆ. ನಾಲ್ವರು ಸ್ನೇಹಿತರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಎರಡು ಬೈಕ್‌ಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. ದೇವಿ ದರ್ಶನದ ಪಡೆದು ಮಳವಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು, ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಮೃತ ದೇಹವನ್ನು ಪಟ್ಟಣದ ಶವಾಗಾರಕ್ಕೆ ಸ್ಥಳಾಂತರಿಸಲಾಗಿತ್ತು. ಸೋಮವಾರ ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.