ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

20ANKOLA3- crime
Published on

ಅಂಕೋಲಾ : ರಸ್ತೆಗೆ ಅಡ್ಡ ಬಂದ ಜಾನುವಾರಗಳನ್ನು ತಪ್ಪಿಸಲು ಬೈಕ್ ಸವಾರ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

ಕುಮಟಾ ತಾಲೂಕಿನ ಮಾದನಗೇರಿ ಹೊಸನಗರದ ಯುವಕ ಸಂತೋಷ ಹನುಮಂತ ಹರಿಕಂತ್ರ (34) ಎಂಬಾತನೇ ಮೃತ ದುರ್ದೈವಿ. ಭಾನುವಾರ ಮಧ್ಯಾಹ್ನ ಮಾದನಗೇರಿಯಿಂದ ಅಂಕೋಲಾ ಕಡೆಗೆ ಬೈಕ್ ಮೇಲೆ ಸಂಚರಿಸುತ್ತಿದ್ದ ವೇಳೆ ಶಿರೂರು ರಸ್ತೆಯೊಂದರಲ್ಲಿ ಬೈಕ್ ಅಪಘಾತವಾಗಿದ್ದು, ಗಂಭೀರ ಗಾಯಗೊಂಡ ಸವಾರನನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಕಾರವಾರ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಹೆಚ್ಚಿನ ಉಪಚಾರಕ್ಕಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.<

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net