ಇಟ್ಟಿಗಟ್ಟಿ ಬಳಿ ಬೈಕ್ ಸವಾರ ಸಾವು

WhatsApp Image 2025-04-22 at 4.37.54 PM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಲಾರಿ- ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನಗರ ಹೊರವಲಯದ ಇಟ್ಟಿಗಟ್ಟಿ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮದ ಶಿವಾನಂದ ಕಂಕುಳಿ (27) ಮೃತ ವ್ಯಕ್ತಿ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net