

ಮಳವಳ್ಳಿ: ತಾಲೂಕಿನ ಬೋಸೇಗೌಡನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಾದಪ್ಪನ ಬೆಟ್ಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಬಿದ್ದು ತೀತ್ರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದ ನಿವಾಸಿ ರಾಮಚಂದ್ರ(42) ಗಾಯಾಳು. ಇವರು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ನಲ್ಲಿ ಪ್ರಯಾಣ ಬೆಳೆಸಿದ್ದರು. ಬೋಸೇಗೌಡನ ದೊಡ್ಡಿ ಗ್ರಾಮದ ಬಳಿ ಎದುರಿನಿಂದ ಬಂದ ವಾಹನದ ಹೆಡ್‌ಲೈಟ್‌ನಿಂದಾಗಿ ರಸ್ತೆ ಕಾಣದೆ ರಸ್ತೆ ಬದಿಗೆ ಇಳಿದಿದೆ. ತೀವ್ರವಾಗಿ ಗಾಯಗೊಂಡು ಎಡ ಗಾಲಿನ ಮೂಳೆ ಮುರಿದು ನರಳಾಡುತ್ತಿದ ಸವಾರನನ್ನು ಇದೇ ಮಾರ್ಗವಾಗಿ ಸಾಗುತ್ತಿದ್ದ ಇತರ ವಾಹನಗಳ ಚಾಲಕರು, ತುರ್ತು ಚಿಕಿತ್ಸಾ ವಾಹನಕ್ಕೆ ಕರೆಮಾಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರವಾನಿದ್ದು, ಪ್ರಥಮ ಚಿಕಿತ್ಸೆಯ ನಂತರ ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆ ಕಳುಹಿಸಲಾಗಿದೆ. ಈ ಸಂಬಂಧ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.