ಚಿಂತಾಮಣಿ: ಬೆಂಗಳೂರು ರಸ್ತೆಯ ಡಾಬಾ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಕಾರು ಜಖಂ ಆಗಿದ್ದು, ಬೈಕ್ ಸವಾರ ಗಾಯಗೊಂಡಿದ್ದಾನೆ.
ಬೈಕ್ ಸವಾರ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಮೂರ್ಛೆ ಹೋದ ಆತನನ್ನು ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಕಾರಿನ ಮಾಲೀಕ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಡೇಗಂಡ್ಲು ಗ್ರಾಮದ ನಿವಾಸಿ ಕೆ.ವಿ.ವೆಂಕಟೇಶ್ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.