ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯ

Bike Accident
Published on

ಕೊಳ್ಳೇಗಾಲ: ತಾಲೂಕಿನ ಉತ್ತಂಬಳ್ಳಿ-ಮಾಂಬಳ್ಳಿ ಗ್ರಾಮದ ನಡುವೆ ಗುರುವಾರ ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾನೆ.

ತಾಳವಾಡಿ ಸಮೀಪದ ಇಗ್ಗಲ್ಲೂರು ಗ್ರಾಮದ ಮನೋಜ್ ಗಾಯಗೊಂಡ ಸವಾರ. ಈತ ಉಜ್ಜೀವನ್ ಬ್ಯಾಂಕ್‌ನಲ್ಲಿ ಲೋನ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಎಂದಿನಂತೆ ಮಾಂಬಳ್ಳಿ ಗ್ರಾಮದಲ್ಲಿ ಕೆಲಸ ಮುಗಿಸಿ ಬರುವಾಗ ಉತ್ತಂಬಳ್ಳಿ ಮಾರ್ಗಮಧ್ಯದಲ್ಲಿ ಬೈಕ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದನು.

ಈ ವೇಳೆ ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಸವಾರ ರಸ್ತೆ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಗಾಯಾಳುವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಈ ಸಂಬಂಧ ಅಗರ- ಮಾಂಬಳ್ಳಿ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net