ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ

byke
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಹೊಟೇಲ್ ಜಂಕ್ಷನ್ ಬಳಿ ಶನಿವಾರ ಕಾರು ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕಡಿಯಾಳಿ ನಿವಾಸಿ ಸುರೇಶ್ ಗಾಯಾಳು. ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಬೈಕ್‌ಗೆ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಗಾಯಾಳುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ಕಾಪು ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net