

ಅರಸೀಕೆರೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಪೆಟ್ರೋಲ್ ಬಂಕ್ ಬಳಿ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ.
ಕೆಪಿಎಸ್ ಬಡಾವಣೆ ನಿವಾಸಿ ರಾಜಶೇಖರ(52) ಕಾಲು ಮುರಿದುಕೊಂಡ ಬೈಕ್ ಸವಾರ.
ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ಕಾರಿನ ಚಾಲಕ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಹಾರಿ ಬಿದ್ದು, ಕಾಲು ಮುರಿದಿದೆ. ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದರೆ ಕಾರಿನ ಚಾಲಕ ಪರಾರಿಯಾಗಿದ್ದಾನೆ.
ಕಾರು-ಬೈಕ್ ಡಿಕ್ಕಿಯ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾಜಶೇಖರ ಕುಟುಂಬ ಸದಸ್ಯರು ನೀಡಿದ ದೂರು ಆಧರಿಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕ ಹಾಗೂ ಚಾಲಕನ ವಿವರ ಪಡೆಯಲು ಪೊಲೀಸರು ಮುಂದಾಗಿದ್ದಾರೆ.