

ಶನಿವಾರಸಂತೆ: ಚೌಡೇನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿಅಪರಿಚಿತ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಿಡ್ತ ಗ್ರಾ.ಪಂ. ವ್ಯಾಪ್ತಿಯ ಚೌಡೇನಹಳ್ಳಿ ಗ್ರಾಮದ ಚಂದನ್(25) ಮೃತ ದುರ್ದೈವಿ. ಸ್ನೇಹಿತನ ಜತೆ ಶನಿವಾರಸಂತೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರು ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.