

ಬೆಳಗಾವಿ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ 3.50 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ದೇಸೂರ ಗ್ರಾಮದ ಕಮಲನಗರದ ಪರುಶರಾಮ ಕುರಲಿ (28) ಬಂಧಿತ ವ್ಯಕ್ತಿ. ಮನೆಯ ಮುಂದೆ,ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನವಾಗಿರುವ ಕುರಿತು ಗ್ರಾಮೀಣ ಪೊಲೀಸ್‌ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿತನನ್ನು ವಿಚಾರಣೆ ನಡೆಸಿ ವಿವಿಧ ಕಂಪನಿಯ 8 ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.