ಬಿಲ್ ಕಲೆಕ್ಟರ್ ಅನುಮಾನಾಸ್ಪದ ಸಾವು

BASAVARAJU
Published on

ಚಾಮರಾಜನಗರ: ತಾಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಬಿಲ್‌ಕಲೆಕ್ಟರ್ ಬಸವರಾಜು(38) ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿತ್ತು. ಆದರೆ ತನಿಖೆ ವೇಳೆ ಇದು ಆತ್ಮಹತ್ಯೆ ಪ್ರಕರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಗ್ರಾಮದ ನಿವಾಸಿಯಾಗಿರುವ ಬಸವರಾಜು ಬುಧವಾರ ರಾತ್ರಿ ಪರಿಚಿತರಿಂದ ಮೊಬೈಲ್ ಕರೆ ಬಂತೆಂದು ಮನೆಯಿಂದ ಹೊರಗೆ ಹೋಗಿದ್ದರು. ಬೆಳಗ್ಗೆ ಇದೇ ಗ್ರಾಮದ ಮಹಿಳೆಯೊಬ್ಬರ ಮನೆ ಮುಂದೆ ಮೃತಪಟ್ಟಿದ್ದರು. ಬೈಕ್ ಮಾತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗ ನಿಂತಿತ್ತು. ಬಸವರಾಜು ಪತ್ನಿ ಮತ್ತು ಕುಟುಂಬಸ್ಥರು ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಮೃತ ವ್ಯಕ್ತಿ ಬಸವರಾಜು ಆತ್ಯಹತ್ಯೆಗೆ ಶರಣಾಗುವ ಮುನ್ನಾ ಬರೆದಿದ್ದ ಪತ್ರ ಸಿಕ್ಕಿದೆ. ಮಹಿಳೆ ಜತೆ ಹೊಂದಿದ್ದ ಅಕ್ರಮ ಸಂಬಂಧಕ್ಕೆ ಕುತ್ತು ಬಂದ ಹಿನ್ನೆಲೆ ವಿಷ ಸೇವಿಸಿ ಬಸವರಾಜು ಸಾವನ್ನಪ್ಪಿದ್ದಾರೆ ಎಂದು ಮೆಲ್ನೋಟಕ್ಕೆ ತಿಳಿದುಬಂದಿದೆ. ಈ ಕುರಿತು ತನಿಖೆ ಮುಂದುವರೆದಿದೆ ಎಂದು ಎಸ್ಪಿ ಆನಂದ್‌ಕುಮಾರ್ ತಿಳಿಸಿದ್ದಾರೆ. ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net