ವಕೀಲರ ರಕ್ಷಣೆಗೆ ಮಸೂದೆ : ಕಾನೂನು ಸಚಿವ ಎಚ್.ಕೆ. ಪಾಟೀಲ್

HK Patil
Published on

ಮೈಸೂರು: ವಕೀಲರ ರಕ್ಷಣೆಗೆ ಮಸೂದೆ ಸಿದ್ಧಪಡಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ತವ್ಯ ಸಂದರ್ಭದಲ್ಲಿ ವೈದ್ಯರ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಮಸೂದೆ ರಚಿಸಲಾಗುತ್ತಿದ್ದು, ನಮ್ಮ ಸರ್ಕಾರ ವಕೀಲರ ರಕ್ಷಣೆಗೆ ಸಿದ್ಧವಿದೆ. ಮುಖ್ಯಮಂತ್ರಿ ಸಿದ್ದರಾಮಂ್ಯು ಅವರೊಂದಿಗೆ ಚರ್ಚಿಸಿದ ನಂತರ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿಲ್ಲ. ಕೆಲವೊಮ್ಮೆ ವಾಧ್ಯಮಗಳೇ ಇಂತಹ ವಿಚಾರ ಪ್ರಸ್ತಾಪ ವಾಡುತ್ತಿದ್ದು, ಇದು ವಾಧ್ಯಮಗಳ ಸೃಷ್ಟಿ ಅಷ್ಟೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ನಂತರ ಸರ್ಕಾರ ಪಥನವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುವಾರಸ್ವಾಮಿ ಹೇಳಿಕೆ ನೀಡಿ ಸರ್ಕಾರವನ್ನು ಅಲುಗಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ನಾವು ಗಟ್ಟಿಂಾಗಿದ್ದೇವೆ. ಅವರ ಹೇಳಿಕೆಯಿಂದ ಏನೂ ಆಗುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net