ಸೆ.9ರಂದು ಬೆಂಗಳೂರಿನಲ್ಲಿ ಬಿಲ್ಲವ, ಅತಿ ಹಿಂದುಳಿದವರ ಸಮಾವೇಶ, ಡಾ.ಪ್ರಣವಾನಂದ ಸ್ವಾಮೀಜಿ ಮಾಹಿತಿ

ಡಾ.ಪ್ರಣವಾನಂದ ಸ್ವಾಮೀಜಿ
ಡಾ.ಪ್ರಣವಾನಂದ ಸ್ವಾಮೀಜಿ
Published on

ಮಂಗಳೂರು: ಬಿಲ್ಲವ ಮತ್ತು ಅತಿ ಹಿಂದುಳಿದ ಸಮುದಾಯಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಲು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾ ಮಂಡಳಿ ಸೆ.9ರಂದು ಬೆಂಗಳೂರಿನ ಅರಮನೆ ಮೈದಾನದ ಸಭಾಂಗಣದಲ್ಲಿ ಸಮಾವೇಶ ಆಯೋಜಿಸಿದೆ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಶ್ರೀ ಡಾ.ಪ್ರಣವಾನಂದ ಸ್ವಾಮೀಜಿ ಹೇಳಿದರು.

ಈ ಸಮಾವೇಶಕ್ಕೆ ಎಲ್ಲ ಜಿಲ್ಲೆಗಳಿಂದ ಸಮುದಾಯ ಮುಖಂಡರನ್ನು ಆಹ್ವಾನಿಸಲಾಗಿದೆ. ಸ್ವತಂತ್ರ ಭಾರತದಲ್ಲಿ ಇಂದಿಗೂ ಬಹುಪಾಲು ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳಿಗೆ ಸಂವಿದಾನದ ಹಕ್ಕು ಲಭಿಸುತ್ತಿಲ್ಲ. ಈ ಬಗ್ಗೆ ಚರ್ಚೆ ಆಗಬೇಕಾಗಿದೆ ಎಂದವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕದ ಬಿಲ್ಲವ, ಈಡಿಗ, ದೀವರು, ನಾಮಧಾರಿ, ಮಡಿವಾಳ, ವಿಶ್ವಕರ್ಮ, ಅಲೆಮಾರಿ, ಅರೆ ಅಲೆಮಾರಿ, ಬೆಸ್ತ, ತಿಗಳ, ಕ್ಷೌರಿಕ, ದೇವಾಂಗ, ಗೊಲ್ಲ, ಯಾದವ, ಉಪ್ಪಾರ, ಹಾಲಕ್ಕಿ ಒಕ್ಕಲಿಗ, ಮೇದಾರ, ಕುಂಬಾರ, ಗೆಜ್ಜೆಗಾರ ಸೇರಿದಂತೆ ನಾನಾ ಹೆಸರಿನಲ್ಲಿ ಒಂದು ಕೋಟಿ ಜನಸಂಖ್ಯೆ ಇದ್ದರೂ, ಒಗ್ಗಟ್ಟಿನ ಕೊರತೆಯಿಂದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ನಾನಮಾನಗಳಿಂದ ವಂಚಿತರಾಗಿದ್ದಾರೆ. ಈ ಎಲ್ಲಾ ವಿಚಾರ ಮುಂದಿಟ್ಟು ಮುಂದಿನ ಜನವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಸಂಘಟಿಸುವ ಕುರಿತೂ ಕೂಡ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪ್ರಮುಖರಾದ ಜಿತೇಂದ್ರ ಜೆ.ಸುವರ್ಣ, ಚಂದರ್ ಕೋಟ್ಯಾನ್, ಲೋಕನಾಥ್ ಪೂಜಾರಿ, ಪ್ರೇಮನಾಥ್, ಶೋಭಾ ಕೇಶವ್ ಮತ್ತು ನಿತಿನ್ ಪೂಜಾರಿ ಸುದ್ದಿಗೋಷ್ಠಿಯಲ್ಲಿದ್ದರು.

----------------------

ರಾಜಕೀಯ ಪಕ್ಷಗಳು ಬಿಲ್ಲವರನ್ನು ಬಳಸಿ, ಬಳಿಕ ಮೂಲೆಗುಂಪು ಮಾಡಿವೆ. ಬಿಲ್ಲವರ ನಿಗಮ-ಮಂಡಳಿ ರಚಿಸಿ 250 ಕೋಟಿ ರೂ. ನೀಡುವ ಆಶ್ವಾಸನೆ ಈಡೇರಿಲ್ಲ. ಕಾಂಗ್ರೆಸ್‌ನಲ್ಲಿ ಜನಾರ್ದನ ಪೂಜಾರಿ ಅವರಂತೆ ಬಿ.ಕೆ.ಹರಿಪ್ರಸಾದ್ ಅವರನ್ನು ಕೂಡ ಮೂಲೆಗುಂಪು ಮಾಡಲಾಗುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಲ್ಲವರಿಗೆ ದ.ಕ, ಉ.ಕ.ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು.

ಡಾ.ಪ್ರಣವಾನಂದ ಸ್ವಾಮೀಜಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net