

ಕೊಕ್ಕರ್ಣೆ: ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವರ ಸೇವಾ ಸಂಘಕ್ಕೆ 25ನೇ ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಏ.31 ಮತ್ತು ಮೇ1ರಂದು ರಜತ ಮಹೋತ್ಸವ ಆಚರಿಸಲಾಗುತ್ತಿದ್ದು, ಭರದ ಸಿದ್ಧತೆಗಳು ನಡೆಯುತ್ತಿವೆ.
ಕಾರ್ಯಕ್ರಮ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಂಘದ ವ್ಯಾಪ್ತಿಯ 800 ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರು, ದಾನಿಗಳು, ಜನಪ್ರತಿನಿಧಿಗಳಿಗೆ ಗೌರವಾರ್ಪಣೆ ನಡೆಯಲಿದ್ದು, ಎರಡು ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಸಂಜೀವ ಮಾತನಾಡಿದರು. ನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶೋಭಾ ಕೆ.ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಕೊಕ್ಕರ್ಣೆಯ ಮಾಜಿ ಯೋಧ ಸುಬೇದಾರ್ ಶೇಖರ ಪೂಜಾರಿ ಹಾಗೂ ಇತರರಿಗೆ ನುಡಿನಮನ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷೆ ಬೇಬಿ ಎಸ್.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ರವಿ ಪೂಜಾರಿ ಮಾರಾಳಿ ವಂದಿಸಿದರು.