

ಹಿರಿಯೂರು: ಇಲ್ಲಿನ ಇತಿಹಾಸ ಪ್ರಸಿದ್ಧ ತೇರುಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಪಂಚಾಮೃತ, ಎಳ ನೀರು ಅಭಿಷೇಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಇತರ ಧಾರ್ಮಿಕ ಕಾರ್ಯ ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಉತ್ಸವ ಮೂರ್ತಿಗೆ ತಹಸೀಲ್ಧಾರ್ ರಾಜೇಶ್ ಕುಮಾರ್ ಪೂಜೆ ಸಲ್ಲಿಸಿ, ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು, ನಗರದ ರಾಜಬೀದಿಯಲ್ಲಿ ಮೆರವಣಿಗೆ ನಡೆಯಿತು.