ಬೆಸಗರಹಳ್ಳಿಯಲ್ಲಿ ಬಿಮಾ ಯೋಜನೆ ಅಭಿಯಾನ

21M.D.R.2
Published on
  • ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಇಂಟಗ್ರಾ ಸಂಸ್ಥೆ ವತಿಯಿಂದ ಶುಕ್ರವಾರ ಪ್ರಧಾನ ಮಂತ್ರಿ ಜೀವನ ಜ್ಯೋತಿ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಅಭಿಯಾನ ಕಾರ್ಯಕ್ರಮ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

  • ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಮುಕುಂದ್ ಶಾಮ್ ಜೀ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬ್ಯಾಂಕಿನ ಗ್ರಾಹಕರಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

  • ಬೆಸಗರಹಳ್ಳಿ ಗ್ರಾಮದ ವೆಂಕಟೇಶ್ ಅಕಾಲಿಕ ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಪತ್ನಿ ಸರಸ್ವತಿ ಅವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಅಡಿಯಲ್ಲಿ 2 ಲಕ್ಷ ರೂ.ಗಳ ವಿಮಾ ಚೆಕ್ ಅನ್ನು ವಿತರಿಸಲಾಯಿತು.
    ಇಂಟಗ್ರಾ ಸಂಸ್ಥೆಯ ಜಿಲ್ಲೆಯ ಮುಖ್ಯ ವ್ಯವಸ್ಥಾಪಕ ಮೋಹನ್‌ಕುಮಾರ್ ಅಭಿಯಾನಕ್ಕೆ ಚಾಲನೆ ನೀಡಿದರು. ಬ್ಯಾಂಕಿನ ವ್ಯವಸ್ಥಾಪಕ ಮಹಮದ್, ಇಂಟೆಗ್ರಾ ಸಂಸ್ಥೆಯ ಶ್ರೀಕಾಂತ್, ಭಾಸ್ಕರ್ ಮತ್ತು ಬ್ಯಾಂಕ್‌ನ ಬಾಲಕೃಷ್ಣ, ಪ್ರಶಾಂತ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net