

ಬಾಗಲಕೋಟೆ: ಬಿವಿವಿ ಸಂಘದ ಇನ್‌ಸ್ಟಿಟ್ಯೂಟ್ ಆ್ ಮ್ಯಾನೆಜ್‌ಮೆಂಟ್ ಸ್ಟಡೀಸ್ ವತಿಯಿಂದ ಆಯೋಜಿಸಲಾದ ಬಿಮ್ಸ್ ಕಪ್ 2023 ಅಂತರ್ ಕಾಲೇಜುಗಳ ಕ್ರಿಕೆಟ್ ಕ್ರೀಡಾ ಕೂಟಕ್ಕೆ ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಲಿಂಗ ತಾರತಮ್ಯ ಹೋಗಲಾಡಿಸಿ ಕ್ರೀಡಾಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ 6 ಜನ ವಿದ್ಯಾರ್ಥಿಗಳು ಮತ್ತು 5 ಜನ ವಿದ್ಯಾರ್ಥಿನಿಯರನ್ನು ಒಳಗೊಂಡ ಟೀಮ್ ಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ವಿಶೇಷವಾಗಿದೆ. ಸಂಘದ ವಿವಿಧ 6 ಕಾಲೇಜುಗಳಿಂದ ಒಟ್ಟು 8 ತಂಡಗಳು ಸೆಣಸಾಡಲಿದ್ದು ವಿಜೇತ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ಸೇರಿದಂತೆ 9 ವಿವಿಧ ಹಂತದ ಬಹುಮಾನಗಳನ್ನು ನೀಡಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಎಸ್.ಎ ನಾವಲಗಿ, ಬಿಮ್ಸ್ ಪ್ರಾಚಾರ್ಯ ಡಾ. ಪ್ರಕಾಶ ವಡವಡಗಿ, ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್ ಮುಗನೂರಮಠ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಕ್ರೀಡಾಪಟುಗಳು ಹಾಜರಿದ್ದರು.