ಮೈಸೂರಿನ ನೂತನ ಡಿಸಿಪಿಯಾಗಿ ಬಿಂದುಮಣಿ ಅಧಿಕಾರ ಸ್ವೀಕಾರ

Bindumani assumes office as new DCP of Mysore
Published on

ಮೈಸೂರು: ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿ ಆರ್.ಎನ್.ಬಿಂದುಮಣಿ ಬುಧವಾರ ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ವಿಭಾಗದಲ್ಲಿ ಎಸ್ಪಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ನೂತನ ಡಿಸಿಪಿಗೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನಿರ್ಗಮಿತ ಡಿಸಿಪಿ ಮುತ್ತುರಾಜ್ ಹೂಗುಚ್ಛ ನೀಡಿ ಅಭಿನಂದಿಸಿದರು. ಬಿಂದು ಮಣಿ 2021ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮುತ್ತುರಾಜ್ ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net