ಬಿನ್ನಾಳ ಗ್ರಾಮಸ್ಥರು ಜಾಗೃತರಾಗಿರಿ - ತಹಸೀಲ್ದಾರ್ ಕಿರಣ್ ಕುಮಾರ್ ಮನವಿ

Binnala Village Tahasildar Visit
ಕುಕನೂರು ತಾಲೂಕಿನ ಬಿನ್ನಾಳ ಗ್ರಾಮಕ್ಕೆ ಶುಕ್ರವಾರ ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಭೇಟಿ ನೀಡಿದ್ದರು.
Published on

ಕುಕನೂರು: ತಾಲೂಕಿನ ಬಿನ್ನಾಳ ಗ್ರಾಮಸ್ಥರು ಜಾಗೃತರಾಗಿರಬೇಕು ಎಂದು ತಹಸೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಹೇಳಿದರು.

ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಕರೊನಾ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು. ಗ್ರಾಮದಲ್ಲಿ ಶುಕ್ರವಾರ 15 ಜನರಲ್ಲಿ ಸೋಂಕು ಕಂಡುಬಂದಿದೆ. ಇದರಿಂದಾಗಿ ಗ್ರಾಮಸ್ಥರು ಕರೊನಾ ಸೋಂಕನ್ನು ಹಗುರವಾಗಿ ಭಾವಿಸಬಾರದು. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಪಂ ಇಒ ಸೋಮಶೇಖರ ಬಿರಾದಾರ ಮಾತನಾಡಿ, ಬಿನ್ನಾಳ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ಸೋಂಕಿತರ ಕುಟುಂಬದವರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗೆ ಸೂಚಿಸಿದರು. ಗ್ರಾಮದಲ್ಲಿ ಮೇ 2 ರವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿದೆ.

ಭಣಗುಡುತ್ತಿವೆ ರಸ್ತೆಗಳು: ಪಟ್ಟಣದ ಪ್ರಮುಖ ರಸ್ತೆಗಳು ಭಣಗುಡುತ್ತಿವೆ. ಬೆಳಗ್ಗೆ 10 ಬಳಿಕ ರಸ್ತೆ ಮೇಲೆ ಜನರು ಕಂಡುಬಂದರೆ ಪೊಲೀಸರು ಕೆಂಡಾಮಂಡಲರಾಗುತ್ತಿದ್ದಾರೆ. ವಿವಿಧೆಡೆ ವಲಸೆ ಹೋಗಿ ಹಿಂದಿರುಗಿರುವ ಜನರು ತಪ್ಪದೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೀಮಾ ಮಾಬಳೆ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net