ಜೈವಿಕ ಇಂಧನ ತಿಳಿವಳಿಕೆ ಅಗತ್ಯ

Biofuel awareness is essential
ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ನಡೆದ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮದಲ್ಲಿ ಕುಲ ಸಚಿವ ಶಂಕರಗೌಡ ಸೋಮನಾಳ ಮಾತನಾಡಿದರು. ಎ.ಎಸ್​. ಪಾಕಿ, ಡಾ. ಬಾಬು ಸಜ್ಜನ, ಗಿರೀಶ ಹಲಕುಡೆ ಮತ್ತಿತರರಿದ್ದಾರೆ.
Published on

ವಿಜಯಪುರ: ಜೈವಿಕ ಇಂಧನವು ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿದ್ದು, ಜತೆಗೆ ದೇಶದ ಪರ್ಯಾಯ ಇಂಧನ ವ್ಯವಸ್ಥೆಗೆ ಸಹಕಾರಿಯಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್​. ಪಾಕಿ ಹೇಳಿದರು.

ನಗರ ಹೊರ ವಲಯದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಜೈವಿಕ ಇಂಧನ ಸಂಶೋಧನೆ ಮಾಹಿತಿ ಹಾಗೂ ಪ್ರಾತ್ಯಕೆ ಕೇಂದ್ರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಹಾಗೂ ಜೈವಿಕ ಸಪ್ತಾಹ&2024 ಅಂಗವಾಗಿ ಜೈವಿಕ ಇಂಧನ ಅರಿವು ಹಾಗೂ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಜೈವಿಕ ಇಂಧನದ ಉಪಯೋಗ, ಉತ್ಪಾದನೆ ಮತ್ತು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಹೊಂದಿರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲ ಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ನವೀಕರಿಸಬಹುದಾದ ಶಕ್ತಿಯ ಉತ್ಪಾದನೆ, ತಂತ್ರಜ್ಞಾನ ಹಾಗೂ ಬಳಕೆಯ ಆಯಾಮಗಳಿಗೆ ಒತ್ತು ನೀಡಬೇಕು.

ಖಾಲಿ ಪ್ರದೇಶಗಳಲ್ಲಿ ಜೈವಿಕ ಇಂಧನ ಸಂಬಂಧಿತ ಸಸ್ಯಗಳನ್ನು ಬೆಳೆಸಬೇಕು. ಅರಣ್ಯವನ್ನು ಬೆಳೆಸುವುದು ಮತ್ತು ಸುಸ್ಥಿರ ಅಭಿವೃದ್ಥಿಯಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರು ಕಾಳಜಿ ವಹಿಸಬೇಕೆಂದು ಅವರು ಸಲಹೆ ನೀಡಿದರು.

ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಡಾ. ಬಾಬು ಸಜ್ಜನ, ವಲಯ ಅರಣ್ಯ ಅಧಿಕಾರಿ ಗಿರೀಶ ಹಲಕುಡೆ, ಸಂಯೋಜಕ ಡಾ. ಬಾಬು. ಆರ್​.ಎಲ್​., ಡಾ. ಅಶೋಕ ಕುಮಾರ ಸುರಪುರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net