

ಕಾರವಾರ: ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರ್‌ಗಳು, ತಾಪಂ ಇಒಗಳು ಹಾಗೂ ಗ್ರಾಪಂ ಪಿಡಿಒಗಳು, ತಮ್ಮ ವ್ಯಾಪ್ತಿಯ ಕೋಳಿ ಫಾರಂ ಹಾಗೂ ಚಿಕನ್ ಅಂಗಡಿಗಳ ಮಾಲೀಕರ ಸಭೆ ಕರೆದು ಚರ್ಚೆ ನಡೆಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿಸಿದರು.
ನರಗದಲ್ಲಿ ಸೋಮವಾರ ಅಽಕಾರಿಗಳ ವಿಡಿಯೋ ಕಾನರೆನ್ಸ್ ಸಭೆ ನಡೆಸಿದ ಅವರು ಹಕ್ಕಿ ಜ್ವರ ಸಂಬಂಧ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜ್ಚರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು(ಎಸ್‌ಒಪಿ) ಪಾಲಿಸುವ ಮೂಲಕ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅದಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ 160 ಕೋಳಿ ಫಾರಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅವುಗಳ ಮಾಲೀಕರಿಗೆ ಹಕ್ಕಿ ಜ್ವರದ ಲಕ್ಷಣಗಳು ಮತ್ತು ಇದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯುತ್ ಅವಘಡಗಳನ್ನು ಹೊರತುಪಡಿಸಿ ಇತರೆ ಕಾರಣಗಳಿಂದ ಸಾಮೂಹಿಕವಾಗಿ 50 ಕ್ಕೂ ಅಽಕ ಕೋಳಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳು ಮೃತಪಟ್ಟಿದ್ದು ಕಂಡು ಬಂದಲ್ಲಿ ಕೂಡಲೇ ಮರಣದ ಕಾರಣದ ಬಗ್ಗೆ ಪರಿಶೀಲಿಸಿ, ಮಾಹಿತಿ ನೀಡುವಂತೆ ಅಽಕಾರಿಗಳಿಗೆ ಸೂಚಿಸಿದರು.
ಡಿಎಚ್‌ಒ ಡಾ.ನೀರಜ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಽಕಾರಿ ಅರ್ಚನಾ ನಾಯಕ, ಜಿಲ್ಲಾ ಮಲೇರಿಯಾ ನಿಯಂತ್ರಣಾಽಕಾರಿ ಕ್ಯಾ. ಡಾ.ರಮೇಶ್ ರಾವ್, ಜಿಲ್ಲಾ ಆರ್‌ಸಿಹೆಚ್ ಅಽಕಾರಿ ಡಾ.ನಟರಾಜ್ ಸಭೆಯಲ್ಲಿ ಹಾಜರಿದ್ದರು.