ಅಭಿವೃದ್ಧಿಗೆ ಶ್ರಮಿಸಿದ ಚೇತನ ಬಿರ್ಸಾಮುಂಡ: ಎಸ್.ಹೊನ್ನೇಗೌಡ

birsamunda jayanthi
Published on

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಕಾರದಲ್ಲಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಬಿರ್ಸಾ ಮುಂಡ ಜಯಂತಿ ಕಾರ್ಯಕ್ರಮ ಬುಧವಾರ ಸರಳವಾಗಿ ಜರುಗಿತು.


ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ, ಇತರರು ಬಿರ್ಸಾ ಮುಂಡರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.


ಬಳಿಕ ಮಾತನಾಡಿ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಬಿರ್ಸಾ ಮುಂಡರವರು ಆದಿವಾಸಿ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಜಾರ್ಖಂಡ್ ರಾಜ್ಯದ ರಾಂಚಿ ಬಳಿ ಜನಿಸಿರುವ ಬಿರ್ಸಾ ಮುಂಡರವರು ಆದಿವಾಸಿ ಜನಾಂಗ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಶ್ರಮಿಸಿದ್ದಾರೆ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಹೇಳಿದರು.


ಬ್ರಿಟಿಷ್ ಸರ್ಕಾರ ಜಾರ್ಖಂಡ್ ಆದಿವಾಸಿಗಳು ವಾಸಿಸುತ್ತಿದ್ದ ಕಾಡು ಮತ್ತು ಅವುಗಳಲ್ಲಿದ್ದ ಹಳ್ಳಿಗಳನ್ನೂ ರಕ್ಷಿತ ಅರಣ್ಯ ಪ್ರದೇಶಗಳೆಂದು ಘೋಷಿಸಿ, ಆ ಮೂಲಕ ಆದಿವಾಸಿಗಳ ಎಲ್ಲಾ ಹಕ್ಕುಗಳನ್ನೂ ಕಿತ್ತುಕೊಂಡಿತು. ಪರಿಣಾಮ ಬ್ರಿಟಿಷರ ಈ ನೀತಿಯ ವಿರುದ್ದ ಬಿರ್ಸಾಮುಂಡರವರು ದೊಡ್ಡ ಹೋರಾಟ ಮಾಡಿದರು. ೧೮೯೩-೯೪ ರಲ್ಲಿ ತನ್ನ ಜನಪ್ರಿಯತೆಯನ್ನೇ ಸ್ವಾತಂತ್ರ್ಯ ಸಂಗ್ರಾಮವಾಗಿ ರೂಪಿಸುವಲ್ಲಿ ಬಿರ್ಸಾ ಮುಂಡ ಯಶಸ್ವಿಯಾದರು ಎಂದು ಎಸ್.ಹೊನ್ನೇಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net