22ರಂದು ಆನೆಗುಂದಿ ಶ್ರೀ ಜನ್ಮ ವರ್ಧಂತಿ

anegundi
ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ.
Published on

ಪಡುಬಿದ್ರಿ: ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ಜನ್ಮ ವರ್ಧಂತಿ ಜುಲೈ 22ರಂದು ಪಡುಕುತ್ಯಾರಿನ ಆನೆಗುಂದಿ ಮಠದಲ್ಲಿ ನಡೆಯಲಿದೆ.

ಬೆಳಗ್ಗೆ ಗಣೇಶ ಅಥರ್ವ ಶೀರ್ಷ ಹೋಮ, ಮಹಾಮೃತ್ಯುಂಜಯ ಹೋಮ, ನವಗ್ರಹ ಹೋಮ, ರುದ್ರ ಹೋಮ, ಧನ್ವಂತರಿ ಹೋಮ, ಸರಸ್ವತೀ ಹೋಮಗಳೊಂದಿಗೆ ಧಾರ್ಮಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ಶಿಷ್ಯವೃಂದದವರಿಂದ ಶ್ರೀಗಳ ತುಲಾಭಾರಸೇವೆ ನಡೆಯಲಿದೆ. ಬಳಿಕ ಧರ್ಮ ಸಭೆಯಲ್ಲಿ ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ಪಂಜ ಭಾಸ್ಕರ ಭಟ್, ಅಂತಾರಾಷ್ಟ್ರೀಯ ಜೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ಮಹಾಸಂಸ್ಥಾನದ ವ್ಯಾಪ್ತಿಯ ಕ್ಷೇತ್ರಗಳ ಧರ್ಮದರ್ಶಿಗಳು, ಆನೆಗುಂದಿ ಪ್ರತಿಷ್ಠಾನ ವಿಶ್ವಸ್ಥ ಮಂಡಳಿ, ಸಹ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಯ ವಿ.ಎಂ.ಜಿ.ಯಶವಂತ ಶರ್ಮ ಅವರಿಗೆ ಗೌರವಾರ್ಪಣೆ ನಡೆಯಲಿದೆ.

27ರಂದು ವಿದ್ಯಾರ್ಥಿ ಅಭಿನಂದನಾ ಸಮಾರಂಭ: ಜುಲೈ 22ರಂದು ಆಯೋಜಿಸಿದ್ದ ವಿದ್ಯಾರ್ಥಿ ಅಭಿನಂದನಾ ಸಮಾರಂಭ 27ಕ್ಕೆ ಮುಂದೂಡಲಾಗಿದೆ. ಅಂದು ಮಧ್ಯಾಹ್ನ 11.30ಕ್ಕೆ ಜಗದ್ಗುರುಗಳ ಜನ್ಮವರ್ಧಂತಿ ಪ್ರಯುಕ್ತ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕಗಳಿಸಿದವರು, ಪದವಿ, ಸ್ನಾತಕೋತ್ತರ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿ ಗಳಿಸಿದವರು, ಪಿಎಚ್‌ಡಿ ಪದವೀಧರರನ್ನು ಅಭಿನಂದಿಸಲಾಗುವುದು.

ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಲಿದ್ದಾರೆ. ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸುವರು. ಮೂಡುಬಿದಿರೆ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ. ಲಿಮಿಟೆಡ್ ಆಡಳಿತ ನಿರ್ದೇಶಕ ಜಿ.ರಾಮಕೃಷ್ಣ ಆಚಾರ್ ಮೂಡುಬಿದಿರೆ, ವಿಶ್ವಕರ್ಮ ಸಹಕಾರ ಬ್ಯಾಂಕ್ ಮಂಗಳೂರು ಅಧ್ಯಕ್ಷ ಹರೀಶ್ ಆಚಾರ್ಯ ಜಲಕದಕಟ್ಟೆ, ಮಂಗಳೂರಿನ ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೊ.ಆಪ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಪೆರ್ಡೂರು, ಕಾಸರಗೋಡು ಸರ್ಕಾರಿ ಕಾಲೇಜು ಸಹ ಪ್ರಾಧ್ಯಾಪಕ ಬಾಲಕೃಷ್ಣ ಹೊಸಂಗಡಿ, ಮೂಡುಬಿದಿರೆ ಎಸ್‌ಎನ್‌ಎಂ ಉಪನ್ಯಾಸಕ ಎಸ್.ಪಿ.ಗುರುದಾಸ್ ಮಂಗಳೂರು ಭಾಗವಹಿಸಲಿದ್ದಾರೆ. ಮಹಾಸಂಸ್ಥಾನದ ದೇವಸ್ಥಾನಗಳ ಧರ್ಮದರ್ಶಿಗಳು, ಸಹ ಟ್ರಸ್ಟ್ ಮತ್ತು ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಮಠದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net