ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ

24adarshkdga1
Published on

ಮಡಿಕೇರಿ: ಡಾ.ರಾಜ್ ಕುಮಾರ್‌ರವರು ಪೌರಾಣಿಕ, ಸಾಮಾಜಿಕ, ಹಾಡುಗಾರಿಕೆ ಹೀಗೆ ಚಿತ್ರರಂಗದ ವಿವಿಧ ಕೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ೨೦೦ ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ ಹೀಗೆ ಹತ್ತು ಹಲವು ಪ್ರಶಸ್ತಿಗಳು ಡಾ.ರಾಜ್‌ಕುಮಾರ್‌ರವರಿಗೆ ಹುಡುಕಿ ಬಂದವು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಹೇಳಿದರು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸರಳವಾಗಿ ಆಯೋಜಿಸಿದ್ದ ಡಾ.ರಾಜ್‌ಕುಮಾರ್‌ರವರ ೯೫ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.


ಡಾ.ರಾಜ್‌ಕುಮಾರ್‌ರವರ ಸರಳತೆ, ಕಲಾಪ್ರತಿಭೆ ಮತ್ತು ಜೀವನ ಶೈಲಿಯಿಂದ ಚಿತ್ರರಂಗದಲ್ಲಿ ಅತ್ಯುನ್ನತ ಸ್ಥಾನಕ್ಕೆ ಬೆಳೆದರು. ೧೯೫೯ ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಡಾ.ರಾಜ್‌ಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಸಾರ್ವಕಾಲಿಕ, ಚಲನಚಿತ್ರ ರಂಗದಲ್ಲಿ ಉತ್ತುಂಗಕ್ಕೆ ಏರಿದರೂ ಸಹ ಸರಳ ವ್ಯಕ್ತಿತ್ವವನ್ನು ಅಳವಡಿಸಿಕೊಂಡಿದ್ದರು. ಸಾಮಾಜಿಕ ಸಂದೇಶಗಳನ್ನು ನೀಡುವ ಚಿತ್ರಗಳನ್ನು ನೀಡಿದ ಹೆಗ್ಗಳಿಕೆ ಡಾ.ರಾಜ್‌ಕುಮಾರ್ ಅವರಿಗೆ ಸಲ್ಲುತ್ತದೆ ಎಂದರು.


ಕೃಷಿ ಇಲಾಖೆಯ ಉಪ ನಿರ್ದೇಶಕ ಬಾಲರಾಜ್ ರಂಗರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net