ಶ್ರೀಶಂಭುನಾಥ ಸ್ವಾಮೀಜಿ ಜನ್ಮ ದಿನಾಚರಣೆ

10ark2
ಅರಕಲಗೂಡಿನಲ್ಲಿ ಸೋಮವಾರ ಹಾಸನ ಆದಿಚುಂಚನಗಿರಿಯ ಹಾಸನ ಶಾಖಾ ಮಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರ ಜನ್ಮ ದಿನದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
Published on

ಅರಕಲಗೂಡು: ಆದಿಚುಂಚನಗಿರಿಯ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಸೋಮವಾರ ಪಟ್ಟಣದಲ್ಲಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.

ಬಿಜಿಎಸ್ ಬಳಗ ಮತ್ತು ಮಹಿಳಾ ಒಕ್ಕಲಿಗರ ವೇದಿಕೆ ಸಹಯೋಗದಲ್ಲಿ ಗ್ರಾಮದೇವತೆ ದೊಡ್ಡಮ್ಮ ದೇವಸ್ಥಾನದಲ್ಲಿ ಶ್ರೀಗಳ ಹೆಸರಿನಲ್ಲಿ ಪೂಜೆ ಸಲ್ಲಿಸಲಾಯಿತು. ತಾಲೂಕು ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ಮಾತನಾಡಿ, ಶ್ರೀ ಶಂಭುನಾಥ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು. ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಒಗ್ಗೂಡಿಸುವ ಜತೆಗೆ ಶೈಕ್ಷಣಿಕವಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಪ್ರಸ್ತುತ ಶ್ರೀಗಳ ಚಿಂತನೆಗಳು ಸಮಾಜಕ್ಕೆ ಅತ್ಯಗತ್ಯ ಎಂದು ತಿಳಿಸಿದರು.

ಬಿಜಿಎಸ್ ಕಾಲೇಜು ಪ್ರಾಂಶುಪಾಲ ಮಹೇಶ್ ಹೊಡೆನೂರು, ಮುಖಂಡರಾದ ಬೈಚನಹಳ್ಳಿ ರಾಜೀವ್, ಪ್ರಭು ಶ್ರೀಧರ್, ಟಿ.ಸಿ.ಮೋಹನ್, ಬರಗೂರು ರಾಜೇಶ್, ಗ್ಯಾಸ್ ಚಂದ್ರು ಮತ್ತು ಬಿಜಿಎಸ್ ಬಳಗದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net