ಸಾಮಾಜಿಕ ಚಟುವಟಿಕೆಗಳ ಮೂಲಕ ಹುಟ್ಟುಹಬ್ಬ ಆಚರಣೆ ಸಮಾಜಕ್ಕೆ ಪೂರಕ

21 ckm 8
ಚಿಕ್ಕಮಗಳೂರು ಹೊರವಲಯದ ಹಿರೇಮಗಳೂರಿನಲ್ಲಿ ಶುಕ್ರವಾರ ಎಚ್.ಡಿ ತಮ್ಮಯ್ಯ ಅಭಿಮಾನಿ ಬಳಗ ಏರ್ಪಡಿಸಿದ್ದ ಶಾಸಕರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಹಿರೇಮಗಳೂರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಉಚಿತವಾಗಿ ನೋಟ್ ಬುಕ್ ವಿತರಿಸಿದರು. ರಾಜು, ಸಂಜಯ್, ಚಂದ್ರು, ಹಾಲೇಶ್, ದರ್ಶನ್, ರಾಮಚಂದ್ರ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜನಪರವಾದ ಸಾಮಾಜಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಯಾರದೇ ಹುಟ್ಟುಹಬ್ಬ ಆಚರಣೆ ಮಾಡಿದರೆ ಅದು ಸಮಾಜಕ್ಕೆ ಪೂರಕವಾಗುತ್ತದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ಅಭಿಪ್ರಾಯಪಟ್ಟರು.

ನಗರದ ಹೊರವಲಯದ ಹಿರೇಮಗಳೂರಿನಲ್ಲಿ ಶುಕ್ರವಾರ ಎಚ್.ಡಿ ತಮ್ಮಯ್ಯ ಅಭಿಮಾನಿ ಬಳಗ ಏರ್ಪಡಿಸಿದ್ದ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಅಭಿನಂದನೆ, ಆಶೀರ್ವಾದ ಪಡೆದು ನಂತರ ಹಿರೇಮಗಳೂರು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಓದುತ್ತಿz್ದೆÃವೆಂಬ ಕೀಳರಿಮೆ ವಿದ್ಯಾರ್ಥಿಗಳಲ್ಲಿ ಬರಬಾರದು. ಖಾಸಗಿ ಶಾಲೆಗಿಂತ ಉತ್ತಮ ಶಿಕ್ಷಣ, ಉತ್ತಮ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲೇ ಇದ್ದಾರೆ. ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯುವಂತೆ ಕರೆ ನೀಡಿದರು.
ಹಿರೇಮಗಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅನೇಕರು ಸಮಾಜದ ಮುನ್ನೆಲೆಗೆ ಬಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ನೀಡುತ್ತಿರುವ ಸೌಲಭ್ಯಗಳನ್ನು ಪಡೆದು ವಿದ್ಯಾರ್ಥಿಗಳು ಶ್ರಮಪಟ್ಟು ಶಿಕ್ಷಣ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ವಿದ್ಯಾವಂತರಾಗಿ ನೌಕರಿ ಪಡೆದರೆ ಸಾಲದು, ಸಂಸ್ಕಾರ ಪಡೆಯುವ ಮೂಲಕ ಶಾಲೆ, ಗ್ರಾಮಕ್ಕೆ, ಪಾಲಕರಿಗೆ ಕೀರ್ತಿ ತರಬೇಕು. ವಿಶ್ವದಲ್ಲೇ ಭಾರತ ಒಂದು ಸುಸಂಸ್ಕೃತ-ಸAಸ್ಕಾರವAತ ರಾಷ್ಟçವಾಗಿದ್ದು, ನೀವು ಸಹ ಇದಕ್ಕೆ ಪೂರಕವಾಗಿ ಸಂಸ್ಕಾರವAತರಾಗಬೇಕು. ಸ್ವಾಮಿ ವಿವೇಕಾನಂದ, ಎಪಿಜೆ ಅಬ್ದುಲ್ ಕಲಾಂ ಸೇರಿದಂತೆ ಹಲವಾರು ಮಹಾ ಪುರಷರ ತತ್ವಾದರ್ಶಗಳು ಮಾದರಿಯಾಗಲಿ ಎಂದು ತಿಳಿಸಿದರು.
೧೦ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯೊಂದಿಗೆ ನನ್ನ ಜನ್ಮ ದಿನವನ್ನು ಹಿತೈಷಿಗಳು, ಸ್ನೇಹಿತರು ಸರಳವಾಗಿ ಆಚರಿಸುತ್ತಿದ್ದಾರೆ. ನನ್ನನ್ನು ಆಹ್ವಾನಿಸಿ ಜನ್ಮದಿನ ಆಚರಿಸುತ್ತಿರುವ ಹಿರೇಮಗಳೂರು ಜನತೆಗೆ ಸದಾ ಚಿರರುಣಿಯಾಗಿರುತ್ತೇನೆ ಎಂದರು.
ತಾವು ವ್ಯಾಸಂಗ ಮಾಡಿದ ಹಿರೇಮಗಳೂರು ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಗುರಿ ಹೊಂದಿz್ದÉÃನೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಅನುದಾನದ ಕೊರತೆ ಇದ್ದು, ಶೀಘ್ರವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಹಕಾರ ಪಡೆದು ಮಾದರಿ ಶಾಲೆಯನ್ನಾಗಿ ಮಾಡುವುದಾಗಿ ಭರವಸೆ ನೀಡಿದರು.
ತಮ್ಮ ಜನ್ಮ ದಿನದ ಅಂಗವಾಗಿ ಹಿರೇಮಗಳೂರು ಶಾಲೆಗೆ ಮಿಕ್ಸಿ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ನಂತರ ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಣೆ ಹಾಗೂ ಜೀವನಸಂಧ್ಯಾ ವೃದ್ಧಾಶ್ರಮದಲ್ಲಿ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಚ್.ಡಿ ತಮ್ಮಯ್ಯ ಅಭಿಮಾನಿ ಸಂಘದ ರಾಜು, ಸಂಜಯ್, ಚಂದ್ರು, ಹಾಲೇಶ್, ದರ್ಶನ್, ರಾಮಚಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net