

ಮಡಿಕೇರಿ: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ೧೨೬ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಪ್ರಮುಖರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಶಿಸ್ತಿಗೆ ಹೆಸರುವಾಸಿಯಾಗಿದ್ದ ಸೇನಾ ದಂಡ ನಾಯಕ ಕಾರ್ಯಪ್ಪ ಅವರು ಭಾರತೀಯ ಸೇನಾ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯ ಬಗ್ಗೆ ಶಾಸಕರು ಗುಣಗಾನ ಮಾಡಿದರು.
ಈ ಸಂದರ್ಭ ಕೆಪಿಸಿಸಿ ಕಾರ್ಯದರ್ಶಿ ಎಚ್.ಎಂ.ನಂದಕುಮಾರ್, ಬ್ಲಾಕ್ ಉಪಾಧ್ಯಕ್ಷ ವಿ.ಜಿ.ಮೋಹನ್, ನಾಮ ನಿರ್ದೇಶಿತ ಸದಸ್ಯರು, ವಿವಿಧ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದು ವೀರ ಸೇನಾನಿಗೆ ನಮಿಸಿದರು.