ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ

nalvadi krishnaraj janmadinacharane
Published on

ಮಡಿಕೇರಿ: ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ವತಿಯಿಂದ ಸರಳವಾಗಿ ಆಚರಿಸಲಾಯಿತು.

ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಕಸಾಪ ಪದಾಧಿಕಾರಿಗಳು ಪುಷ್ಪಾನಮನ ಸಲ್ಲಿಸಿದರು.


ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಕನ್ನಡ, ನಾಡು-ನುಡಿಗೆ ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ಟಿ.ಪಿ.ರಮೇಶ್ ವಿವರಿಸಿದರು.


ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶ್ರಮಿಸಿದ್ದಾರೆ. ರಾಜರ ಆಡಳಿತದ ಮೂಲಕ ಜನಸಾಮಾನ್ಯರ ಬದುಕಿಗೆ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಇಂದಿಗೂ ಸಹ ಜನಮನದಲ್ಲಿ ಉಳಿದಿದ್ದಾರೆ ಎಂದು ನುಡಿದರು.


ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ನಾಡಿನ ಸಂಸ್ಕೃತಿ, ಕಲೆ, ಪರಂಪರೆ ಉಳಿಸಿ ಬೆಳೆಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶ್ರಮಿಸಿದ್ದಾರೆ ಎಂದರು.


ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ನಿಕಟ ಅಧ್ಯಕ್ಷ ಅಂಬೆಕಲ್ಲು ನವೀನ್ ಅವರು ಮಾತನಾಡಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಸಂಪತ್ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net