

ಉಡುಪಿ: ಜನ ಸಂದ ಸ್ಥಾಪಕ ಪಂಡಿತ್ ದೀನ ದಯಾಳ್ ಉಪಾಧ್ಯಾಯ ರಾಷ್ಟಕ್ಕಾಗಿ ಬದುಕಿದ್ದು, ಅವರ ತತ್ವಸಿದ್ಧಾಂತ, ತ್ಯಾಗ ಕಾರ್ಯಕರ್ತರಿಗೆ ಆದರ್ಶವಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಹೇಳಿದರು.
ಬುಧವಾರ ಜಿಲ್ಲಾ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ದೀನ ದಯಾಳ್ ಪಕ್ಷದ ಕಾರ್ಯಕ್ರಮಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅವರು ಶವವಾಗಿ ಪತ್ತೆಯಾಗಿದ್ದು, ಸಾವು ಹೇಗೆ ಸಂಭವಿಸಿತು ಎಂಬುದು ಇಂದಿಗೂ ನಿಗೂಢವಾಗಿ ಉಳಿದಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್, ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮುಖಂಡರಾದ ರಾವೇಂದ್ರ ಉಪ್ಪೂರು, ಪೆರ್ಣಂಕಿಲ ಶ್ರೀಶ ನಾಯಕ್, ರವಿ ಅಮೀನ್ ಬನ್ನಂಜೆ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಶಿಲ್ಪಾ ಜಿ. ಸುವರ್ಣ, ದಿನೇಶ್ ಅಮೀನ್, ಶ್ರೀಕಾಂತ್ ಕಾಮತ್, ದಿವಾಕರ ಶೆಟ್ಟಿ, ಶ್ರೀನಿಧಿ ಹೆಗ್ಡೆ, ನೀತಾ ಪ್ರಭು ಉಪಸ್ಥಿತರಿದ್ದರು. ರೇಶ್ಮಾ ಉದಯ ಶೆಟ್ಟಿ ನಿರೂಪಿಸಿ, ವಂದಿಸಿದರು.