ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ : ಯಶ್ ಪಾಲ್ ಸುವರ್ಣ

IMG-20231013-WA0003
Published on

ಉಡುಪಿ: ಇಸ್ರೇಲ್ ಹಮಾಸ್ ಉಗ್ರರ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಆಪರೇಶನ್ ಅಜಯ್ ಮೂಲಕ ಭಾರತೀಯರನ್ನು ತಾಯ್ನಾಡಿಗೆ ಕರೆತರುತ್ತಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಉಡುಪಿ  ಧರ್ಮ ಪ್ರಾಂತ್ಯದ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರನ್ನು ಭೇಟಿ ಮಾಡಿ ಅವರು ಮಾತನಾಡಿದರು.

ಕರಾವಳಿ ಜಿಲ್ಲೆಯ ನೂರಾರು ಮಂದಿ ಇಸ್ರೇಲ್ ನಲ್ಲಿ  ಉದ್ಯೋಗದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯದವರಾಗಿದ್ದಾರೆ. ಈಗಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ವಿದೇಶಾಂಗ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.

 ಉಡುಪಿ ಶಾಸಕರ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿದ್ದು, ದೆಹಲಿಯ ರಾಯಭಾರಿ ಕಚೇರಿಯ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಹಕಾರ ನೀಡಲಾಗುತ್ತಿದೆ
ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಗುರು ಚಾರ್ಲ್ಸ್ ಮಿನೇಜಸ್, ಸಮುದಾಯದ ಪ್ರಮುಖರಾದ ರಾಜೇಶ್, ಆಲ್ವಿನ್ ಡಿಸೋಜ, ಡೆನಿಸ್ ಮಸ್ಕರೇನಸ್ , ಶೆರ್ಲಿನ್, ನಗರ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮೀನ್, ಮಾಜಿ ನಗರ ಸಭಾ ಸದಸ್ಯರಾದ ಪ್ರಶಾಂತ್ ಭಟ್,  ಅರುಣಾ ಪೂಜಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net