ಬಿಸಿಯೂಟ ನೌಕರರ ಸೇವೆ ಕಾಯಂಗೊಳಿಸಿ

Kudlgi Protst
ಕೂಡ್ಲಿಗಿ ತಹಸೀಲ್ದಾರ್ ಎಂ.ರೇಣುಕಾಗೆ ಬಿಸಿಯೂಟ ಕಾರ್ಯಕರ್ತೆಯರು ಶನಿವಾರ ಮನವಿ ಸಲ್ಲಿಸಿದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ, ಪ್ರಮುಖರಾದ ಜಿ.ಸುಜಾತಾ, ಜಿ.ಉಷಾರಾಣಿ ಇತರರಿದ್ದರು.
Published on

ಕೂಡ್ಲಿಗಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಹಾಗೂ ಎಐಟಿಯುಸಿನಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಂ.ರೇಣುಕಾಗೆ ಮನವಿ ಸಲ್ಲಿಸಲಾಯಿತು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ ಮಾತನಾಡಿ, ತಾಲೂಕಿನ ಅನೇಕ ಶಾಲೆಗಳಲ್ಲಿ ಬಿಸಿಯೂಟ ಕೊಠಡಿಗಳು ಸೋರುತ್ತಿವೆ. ಅಲ್ಲದೆ ಹಲವೆಡೆ ಬಿಸಿಯೂಟ ಕಾರ್ಯಕರ್ತೆಯರನ್ನು ನಿಯಮ ಬಾಹಿರವಾಗಿ ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಶಿಕ್ಷಕರಿಗೆ ಪ್ರತ್ಯೇಕ ಊಟ ಮಾಡಿಕೊಡಬೇಕು.

ಇಪ್ಪತ್ತು ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರಿಗೆ ಈಗ ನೀಡುತ್ತಿರುವ ಗೌರವಧನ ಯಾವುದಕ್ಕೂ ಸಾಲುತ್ತಿಲ್ಲ. ಆದ್ದರಿಂದ ಅವರ ಸೇವೆ ಕಾಯಂಗೊಳಿಸಿ 18 ಸಾವಿರ ರೂ. ವೇತನ ನೀಡಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ವರ್ಷವಾದರೂ ಭರವಸೆ ಈಡೇರಿಸಿಲ್ಲ. ತಕ್ಷಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಅಕ್ಷರ ದಾಸೋಹ ಎಡಿ ಕೆ.ಜಿ.ಆಂಜನೇಯಗೂ ಮನವಿ ಸಲ್ಲಿಸಲಾಯಿತು. ಫೆಡರೇಷನ್ ತಾಲೂಕು ಅಧ್ಯಕ್ಷೆ ಜಿ.ಸುಜಾತಾ, ಕಾರ್ಯದರ್ಶಿ ಜಿ.ಉಷಾರಾಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net