ಬೈವೀಕ್ಲಿ ಎಕ್ಸ್​ಪ್ರೆಸ್ ರೈಲು

New Train
Published on

ಹುಬ್ಬಳ್ಳಿ : ತೆಲಂಗಾಣ ಮತ್ತು ಗೋವಾ ರಾಜ್ಯಗಳ ನಡುವಿನ ಪ್ರವಾಸೋದ್ಯಮ ಮತ್ತು ಸಂಪರ್ಕಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಕಂದರಾಬಾದ್ ಮತ್ತು ವಾಸ್ಕೋ ನಿಲ್ದಾಣಗಳ ಮಧ್ಯೆ ಹೊಸ ದ್ವಿಸಾಪ್ತಾಹಿಕ ಎಕ್ಸ್​ಪ್ರೆಸ್ ರೈಲು ಸೇವೆ ಪ್ರಾರಂಭಿಸಲಾಗುತ್ತಿದೆ.

ಅ. 9 ರಿಂದ ಜಾರಿಗೆ ಬರುವಂತೆ ಸಿಕಂದರಾಬಾದ್​- ವಾಸ್ಕೋ ಬೈ ವೀಕ್ಲಿ ಎಕ್ಸ್​ಪ್ರೆಸ್ ರೈಲು ಸಿಕಂದರಾಬಾದ್​ನಿಂದ ಪ್ರತಿ ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 10.05 ಕ್ಕೆ ಹೊರಟು, ಮಾರನೇ ದಿನ ಬೆಳಗಿನಜಾವ 5.45 ಕ್ಕೆ ವಾಸ್ಕೋ ತಲುಪಲಿದೆ.

ಅ. 10ರಿಂದ ವಾಸ್ಕೋ-ಸಿಕಂದರಾಬಾದ್ ಬೈವೀಕ್ಲಿ ಎಕ್ಸ್​ಪ್ರೆಸ್ ರೈಲು ಪ್ರತಿ ಗುರುವಾರ ಮತ್ತು ಶನಿವಾರ ಬೆಳಗ್ಗೆ 9 ಗಂಟೆಗೆ ಹೊರಟು, ಮಾರನೇ ದಿನ ಬೆಳಗ್ಗೆ 6.20ಕ್ಕೆ ಸಿಕಂದರಾಬಾದ್ ನಿಲ್ದಾಣ ತಲುಪಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net