ಪ್ರತಿ ಮನೆಗೂ ಕೇಂದ್ರದ ಯೋಜನೆ ತಲುಪಿಸಿ

05-GPT-2
Published on

ಗುಂಡ್ಲುಪೇಟೆ : ಕಾರ್ಯಕರ್ತರು ಕೇಂದ್ರ ಸರ್ಕಾರದ ಜನಪರ ಹಾಗೂ ಪ್ರಗತಿಪರ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಬೇಕು ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ನೂತನ ಮಂಡಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇವಲ ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರದ ಯೋಜನೆಗಳು ಅಸಮರ್ಪಕವಾಗಿವೆ. ಬಹಳಷ್ಟು ಜನರಿಗೆ ಇನ್ನೂ ವಿವಿಧ ಯೋಜನೆಗಳ ಲಾಭ ದೊರಕಿಲ್ಲ. ಆದರೆ ನರೇಂದ್ರ ಮೋದಿ ಬ್ಯಾಂಕುಗಳಲ್ಲಿ ಬಡ ಹಾಗೂ ಸಾಮಾನ್ಯರಿಗೆ ಉಪಯೋಗವಾಗುವ ಕಾರ್ಯಕ್ರಮ ಕೈಗೊಂಡಿದ್ದಾರೆ. ಬಡವರೂ ಉಚಿತ ಖಾತೆ ತೆರೆಯುವಂತೆ ಮಾಡಿ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯ ಲಾಭ ದೊರಕಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net