ಶುಕ್ರವಾರದ ಪಾದಯಾತ್ರೆಗೆ ಬಿಜೆಪಿ ಬೆಂಬಲ

BJP
Published on

ಕುಶಾಲನಗರ:

ಕೊಡಗು ವಿಶ್ವ ವಿದ್ಯಾಲಯ ಉಳಿಸಿ ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಅಳುವಾರದಿಂದ ಕುಶಾಲನಗರದ ತನಕ ಶುಕ್ರವಾರ (ಫೆ.28) ನಡೆಯಲಿರುವ 16 ಕಿಮೀ ಪಾದಯಾತ್ರೆಗೆ ಜಿಲ್ಲಾ ಬಿಜೆಪಿಯೂ ಬೆಂಬಲಿಸಲಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದ್ದು, ಬೆಳಗ್ಗೆ 9.30ಕ್ಕೆ ಆಳುವಾರದಿಂದ ಆರಂಭ ಆಗಲಿದೆ. ನಂತರ ಕುಶಾಲನಗರದಲ್ಲಿ ಸಭೆ ಆಯೋಜಿಸಲಾಗಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಭಾಗವಹಿಸುವರು. ವಿವಿಯ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಳ್ಳುವರು.

ಕೊಡಗು ವಿವಿಯನ್ನು ಬೇರೆ ವಿವಿ ಜತೆ ವಿಲೀನ ಮಾಡಲು ಕೂಡ ವಿರೋಧ ಇದೆ. 20 ವರ್ಷಗಳ ಕಾಲ ನಡೆಸಿದ ಸತತ ಪ್ರಯತ್ನದ ಫಲವಾಗಿ ಕೊಡಗಿಗೆ ಈ ವಿವಿ ಸಿಕ್ಕಿದೆ. ಆರಂಭದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಇಲ್ಲಿ ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರ ಆರಂಭಿಸಲಾಗಿತ್ತು. ನಂತರದ ವರ್ಷಗಳಲ್ಲಿ ವಿಶ್ವ ವಿದ್ಯಾಲಯ ಆಗಿದೆ. ಸುಮಾರು 500ರಷ್ಟು ವಿದ್ಯಾರ್ಥಿಗಳು ಈ ಕೇಂದ್ರದಲ್ಲಿ ಇದ್ದಾರೆ. 5-6 ಸಾವಿರಷ್ಟು ವಿದ್ಯಾರ್ಥಿಗಳು ಪದವಿ ಓದುತ್ತಿದ್ದಾರೆ. ಇಲ್ಲಿ ಎಲ್ಲಾ ವ್ಯವಸ್ಥೆ ಇದೆ. ಕೊಡಗನ್ನು ವಿಶೇಷವಾಗಿ ಪರಿಗಣಿಸಿ ಕೊಡಗು ವಿವಿ ಮುಂದುವರಿಸಬೇಕು. ಕಾಂಗ್ರೆಸ್ ಸರ್ಕಾರವೇ ಇರುವುದರಿಂದ ಸ್ಥಳೀಯ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು. ದಾರಿ ತಪ್ಪಿಸುವ ಕೆಲಸ ಮಾಡದೇ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು

ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್, ಉಪಾಧ್ಯಕ್ಷ ಅಜೀಶ್, ಕೂಡಿಗೆ ಗ್ರಾ.ಪಂ. ಅಧ್ಯಕ್ಷ ಗಿರೀಶ್, ಪ್ರಮುಖರಾದ ವೈಶಾಕ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net