

ಮಡಿಕೇರಿ:
ಕೊಡಗು ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಮರುನೇಮಕವಾದ ನಾಪಂಡ ರವಿ ಕಾಳಪ್ಪ ಬುಧವಾರ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಆದೇಶ ಪ್ರತಿ ಸ್ವೀಕರಿಸಿದರು.
ರಾಜ್ಯ ಚುನಾವಣಾ ಅಧಿಕಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ ರಾಜೀವ,ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ರಾಜ್ಯದ ಪದಾಧಿಕಾರಿಗಳು ಇದ್ದರು.