ಬಿಜೆಪಿಯಿಂದ ಬಲಿದಾನ್ ದಿವಸ್ ಆಚರಣೆ

bjp
Published on

ಮಡಿಕೇರಿ:

ಜನ ಸಂಘದ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮ ದಿನದ ಹಿನ್ನೆಲೆಯಲ್ಲಿ ಮಡಿಕೇರಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಬಿಜೆಪಿ ವತಿಯಿಂದ ಬಲಿದಾನ್ ದಿವಸ್ ಆಗಿ ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ತ್ಯಾಗ ಬಲಿದಾನದ ವಿಚಾರದಲ್ಲಿ ಮಾತನಾಡಿದರು.

ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಕಾಂಗೀರ ಸತೀಶ್, ಮನು ಮಂಜುನಾಥ್, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದÀಲ್ಪಾಡಿ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್, ಮಾಜಿ ಜಿಲ್ಲಾಧ್ಯಕ್ಷರಾದ ಬಿ.ಬಿ. ಭಾರತೀಶ್, ರಾಬಿನ್ ದೇವಯ್ಯ, ಪ್ರಮುಖರಾದ ಸಂಪತ್, ಪಿಎಂ. ರವಿ ಮತ್ತಿತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net