

ಮಂಗಳೂರು : ಬಿಜೆಪಿಯ ಸಕ್ರಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಪಕ್ಷದ ಸಕ್ರಿಯ ಸದಸ್ಯನಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮರು ನೋಂದಣಿ ಮಾಡಿಸಿಕೊಂಡರು.
ಈ ಸಂದರ್ಭ ಕ್ಯಾ. ಚೌಟ ಮಾತನಾಡಿ ‘ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಸಕ್ರಿಯ ಸದಸ್ಯತಾ ಅಭಿಯಾನ ಪ್ರಾರಂಭಿಸಿದ್ದು, ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಬಿಜೆಪಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಹಾಗೂ ಮೋದಿ ಅವರ ವಿಕಸಿತ ಭಾರತದ ಪರಿಕಲ್ಪನೆಗೆ ವೇಗ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದರು.
ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಉಪಸ್ಥಿತರಿದ್ದರು.