ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

1010
Published on

ಬೆಳಗಾವಿ: ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಬಿಜೆಪಿ ಕಾರ್ಯಕರ್ತರು ಚನ್ನಮ್ಮ ವೃತ್ತದ ಬಳಿ ಮಂಗಳವಾರ ವಿಜಯೋತ್ಸವ ಆಚರಿಸಿದರು. ಗುಲಾಲ ಎರಚಿ, ಪಕ್ಷದ ಪರ ಜಯಘೋಷ ಕೂಗಿ ಸಂಭ್ರಮಿಸಿದರು.

ನಗರದ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಕ್ಷ ಮತ್ತು ದೇವರಿಗೆ ಜಯೋಷ ಹಾಕಿದರು. ಬಿಜೆಪಿ ಮುಖಂಡರಾದ ಲೀನಾ ಟೋಪಣ್ಣವರ, ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ, ಪಾಂಡುರಂಗ ಧಾಮಣೇಕರ, ಮುರುಘೇಂದ್ರಗೌಡ ಪಾಟೀಲ, ರುದ್ರಣ್ಣ ಚಂದರಗಿ, ಶರದ್ ಪಾಟೀಲ ಮತ್ತಿತರ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net